Site icon Kundapra.com ಕುಂದಾಪ್ರ ಡಾಟ್ ಕಾಂ

ಜನತಾ ಪ.ಪೂ ಕಾಲೇಜಿನಲ್ಲಿ ಮಾದಕ ವ್ಯಸನದ ವಿರುದ್ಧ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವ್ಯಸನದ ವಿರುದ್ಧ ಮಾಹಿತಿ ಕಾರ್ಯಕ್ರಮ ನಡೆಯಿತು.

ಕಂಡ್ಲೂರು ಪೋಲಿಸ್ ಠಾಣೆಯ ಢಾಣಾಧಿಕಾರಿಗಳಾಗಿರುವ ಭೀಮಾಶಂಕರ್ ಅವರು ಮಾದಕ ವ್ಯಸನದ ವಿರುದ್ಧದ ಕುರಿತಾಗಿ  ಮಾಹಿತಿ  ನೀಡಿ, ಇಂದಿನ ಈ ಯುಗದಲ್ಲಿ ಆರೋಗ್ಯಕ್ಕೆ ಹಾನಿಯುಂಟುಮಾಡುವ ಮಾದಕ ವ್ಯಸನಗಳು ತುಂಬಾ ಸುಲಭವಾಗಿ ಕೈಗೆ ಸಿಗುತ್ತಿದ್ದು, ಅವೆಲ್ಲವನ್ನೂ ಸ್ವೀಕರಿಸಬೇಡಿ ಆರೋಗ್ಯದ ಕುರಿತಾಗಿ ಜಾಗ್ರತಿ ವಹಿಸಿ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಠಾಣಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಉಪನ್ಯಾಸಕರಾದ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿ, ಅಭಿಜಿತ್ ವಂದಿಸಿದರು.

Exit mobile version