ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಕಲೆ ಹಾಗೂ ಸಾಹಿತ್ಯಾಸಕ್ತಿ ಬೆಳೆಸುವ ಉದ್ದೇಶದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ಕೆಂಪೇಗೌಡರ ಜನ್ಮದಿನದ ಪ್ರಯುಕ್ತ ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ನಡೆಸಿದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಕ್ಷಿತಾ ದ್ವಿತೀಯ ಸ್ಥಾನವನ್ನು, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರತಿಕ್ಷಾ ಸಮಾಧಾನಕರ ಬಹುಮಾನವನ್ನು ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ವರ್ಷಿಣಿ ಸಮಾಧಾನಕರ ಬಹುಮಾನವನ್ನು ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಂಸ್ಕೃತಿಕವಾಗಿ ಸಂಸ್ಥೆಯ ಕೀರ್ತಿಯನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ದ ಅವರನ್ನು ಆಡಳಿತ ಮಂಡಳಿಯವರು ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

