Site icon Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ 2025–26ನೇ ಶೈಕ್ಷಣಿಕ ಸಾಲಿನಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ  ಚಟುವಟಿಕೆಗಳಾದ ಸಂಗೀತ, ನೃತ್ಯ, ಶ್ಲೋಕ ಪಠಣ, ಕಥೆ ಹೇಳುವಿಕೆ, ಕರಾಟೆ ಮೊದಲಾದ ಪ್ರತಿಭೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಪ್ರದರ್ಶಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರತೆಗೆಯುವುದರ ಜೊತೆಗೆ, ವೇದಿಕೆಯ ಭಯ ನಿವಾರಣೆಗಾಗಿಯೂ ಸಹಕಾರಿ ಆಯಿತು. ಮಕ್ಕಳು ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಹಾಗೂ ಆತ್ಮವಿಶ್ವಾಸದಿಂದ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version