Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಕರಾವಳಿ ಕಾವಲು ಪೋಲಿಸ್ ಠಾಣೆಯಿಂದ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಬೀಳ್ಕೊಡುಗೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿ ಕರಾವಳಿ ಕಾವಲು ಪೋಲಿಸ್ ಠಾಣೆಯಿಂದ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭವು ಗಂಗೊಳ್ಳಿಯ ಕರಾವಳಿ ಕಾವಲು ಪೋಲಿಸ್ ಠಾಣೆಯಲ್ಲಿ ನಡೆಯಿತು.

ಗಂಗೊಳ್ಳಿ ಕರಾವಳಿ ಕಾವಲು ಪೋಲಿಸ್ ಠಾಣೆಯಿಂದ ವರ್ಗಾವಣೆಗೊಂಡ ಎಎಸ್ಸೈ ಭಾಸ್ಕರ, ಸಿಬ್ಬಂದಿಗಳಾದ ಸುರೇಂದ್ರ ಡಿ., ಉದಯ ಗೌಡ ಹಾಗೂ ಯಶೋಧ ಅವರನ್ನು ಠಾಣೆಯ ಪರವಾಗಿ ಇನ್ಸಪೆಕ್ಟರ್ ವಸಂತ ರಾಮ ಆಚಾರ್ ಸನ್ಮಾನಿಸಿ ಬೀಳ್ಕೊಟ್ಟರು.

ಉಪನಿರೀಕ್ಷಕರಾದ ಸುಬ್ರಹ್ಮಣ್ಯ ಎಚ್. ಮತ್ತು ಮುಕ್ತಾ ಬಾಯಿ, ಸಹಾಯಕ ಉಪನಿರೀಕ್ಷಕರಾದ ಬಾಬು ಪೂಜಾರಿ ಮತ್ತು ಮಂಜುನಾಥ ಗಾಣಿಗ, ಸ್ಥಳೀಯ ಮುಖಂಡ ಹರೀಶ್ ಕೊಡಪಾಡಿ, ಠಾಣೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

ನಾಗರಾಜ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿಗಳಾದ ರಾಘವೇಂದ್ರ ದೇವಾಡಿಗ ಸ್ವಾಗತಿಸಿ, ದಿನೇಶ ವಂದಿಸಿದರು.

Exit mobile version