Kundapra.com ಕುಂದಾಪ್ರ ಡಾಟ್ ಕಾಂ

ಮನೋಬಲ ವೃದ್ಧಿಗಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ರಾಜು ದೇವಾಡಿಗ

ಹೆಮ್ಮಾಡಿ ಜನತಾ ಪ್ರೌಢ ಶಾಲೆ ಮತ್ತು ಕಾಲೇಜು ಕ್ರೀಡೋತ್ಸವ

ಕುಂದಾಪುರ: ಕ್ರೀಡೆಯ ಮೂಲಕ ದೈಹಿಕ ಮತ್ತು ಮಾನಸಿಕ ಸದೃಢತೆಯಿಂದ ಪಠ್ಯ ಚಟುವಟಿಕೆಗಳಿಗೆ ಪೂರಕವಾಗಿದೆ. ಮನೋಬಲ ವೃದ್ಧಿಗಾಗಿ ಕ್ರೀಡೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಿ ಎಂದು ಹೆಮ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ದೇವಾಡಿಗ ಹೇಳಿದರು.

ಅವರು ಹೆಮ್ಮಾಡಿ ಶ್ರೀ.ವಿ.ವಿ.ವಿ. ಮಂಡಳಿಯ ಅಧೀನಕ್ಕೆ ಒಳಪಟ್ಟ ಜನತಾ ಪ್ರೌಢ ಶಾಲೆ ಮತ್ತು ಜನತಾ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಸಾಧು.ಎಸ್.ಬಿಲ್ಲವ ಸಭೆಯ ಅಧ್ಯಕ್ಷತೆ ವಹಿಸಿ, ಕ್ರೀಡಾ ದ್ವಜವನ್ನು ಅರಳಿಸಿದರು. ನಂತರ ಅವರು ಮಾತನಾಡಿ, ವಿದ್ಯಾರ್ಥಿಗಳು ಅತಿಯಾಗಿ ಮೊಬೈಲ್ ಮತ್ತು ಆಧುನಿಕ ತಾಂತ್ರಿಕತೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುವುದರಿಂದ ಆಂತರಿಕ ಮತ್ತು ಬಾಹ್ಯ ಒತ್ತಡಕ್ಕೆ ಒಳಗಾಗುತ್ತಾರೆ.ವ್ಯಸನಗಳನ್ನು ಬಿಟ್ಟು ಕ್ರೀಡೆಯ ಮೂಲಕ ಸದೃಢ ಆರೋಗ್ಯವಂತರಾಗಿ, ಸುಂದರ ಬದುಕಿಗಾಗಿ ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಎಂದರು. ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ಜನತಾ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬಿ.ಮೋಹನದಾಸ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ಜಗದೀಶ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ದೇವೇಂದ್ರ ವಂದಿಸಿದರು.

Exit mobile version