ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಜ್ಯದಲ್ಲಿ ಕರ್ನಾಟಕ ದಲಿತ ಸಂಘದ ಸಮಿತಿ ಕಳೆದ ಹಲವರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿವೆ. ಸಮಾಜದಲ್ಲಿ ಸಂಕಷ್ಠಕ್ಕೆ ಒಳಗಾಗಿರುವ ಸಮುದಾಯಗಳಿಗೆ ಹೋರಾಟ, ಪ್ರತಿಭಟನೆಯ ಮೂಲಕ ನ್ಯಾಯ ಒದಗಿಸಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಶಾಖೆಗಳ ಮೂಲಕ ಸಂಘಟನೆಗೆ ಆದ್ಯತೆ ನೀಡಲಾಗಿದೆ ಎಂದು ಕರ್ನಾಟಕ ದಲಿತ ಸಂಘದ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಹೇಳಿದರು.
ಅವರು ರೋಟರಿ ಸಮುದಾಯ ಭವನದಲ್ಲಿ ನಡೆದ ಕರ್ನಾಟಕ ದಲಿತ ಸಂಘದ ಸಮಿತಿ, ಅಂಬೇಡ್ಕರ್‌ವಾದ ಜಿಲ್ಲಾ ಸಮಿತಿ, ಬೈಂದೂರು ತಾಲೂಕು ಸಮಿತಿ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಭೀಮ ಶಕ್ತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಾಮೂಹಿಕ ಪುಷ್ಪನಮನ ಸಲ್ಲಿಸಲಾಯಿತು. ಸಮುದಾಯದ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು, ಘಟಕದ ನೂತನ ಅಧ್ಯಕ್ಷ ಶಿವರಾಜ್ ಬೈಂದೂರು, ಜಿಲ್ಲಾ ಖಜಾಂಚಿ ಭಾಸ್ಕರ್ ಮಾಸ್ಟರ್, ವಜ್ರದುಂಬಿ ಗೆಳೆಯರ ಬಳಗದ ಅಧ್ಯಕ್ಷ ರಾಘವೇಂದ್ರ ಬೈಟು, ಜಿಲ್ಲಾ ಸಂಘಟನಾ ಸಂಚಾಲಕ ಸುರೇಶ್ ಹಕ್ಲಾಡಿ, ಕುಂದಾಪುರ ತಾಲೂಕು ಸಂಚಾಲಕ ರಾಜು ಕೆ. ಸಿ. ಬೆಟ್ಟಿನಮನೆ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಗೀತಾ ಸುರೇಶ್ ಕುಮಾರ್, ಜನಪರ ಹೋರಾಟಗಾರರಾದ ಕೆ. ಎಲ್. ಅಶೋಕ್, ಮಾಧವ ಬಾಕಡ, ಮಹಿಳಾ ಸಂಚಾಲಕಿ ವಿನೋದಾ ಮಾಸ್ತಿಕಟ್ಟೆ ಇದ್ದರು.
ರವಿ ಬನ್ನಾಡಿ ಹಾಗೂ ಚೈತ್ರಾ ಯಡ್ತರೆ ನಿರೂಪಿಸಿ, ಸುರೇಶ್ ಕುಮಾರ್ ಬೈಂದೂರು ಸ್ವಾಗತಿಸಿ, ಜಿಲ್ಲಾ ಸಂಘಟನಾ ಸಂಚಾಲಕ ಮಂಜುನಾಥ ನಾಗೂರು ವಂದಿಸಿದರು.