ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿ ಬಳಿಯ ಮ್ಯಾಕ್ಸಿಮಾ ವಿಲ್ಲಾ ಮನೆಗೆ ಮಾರಕಾಸ್ತ್ರಗಳೊಂದಿಗೆ ಕಳ್ಳರು ನುಗ್ಗಲು ಯತ್ನಿಸಿದ ಘಟನೆ ಇತ್ತೀಚಿಗೆ ನಡೆದಿದೆ.
ಬಾಗಿಲಿನ ನೆಟ್ ಮುರಿದು ಒಳಗೆ ನುಗ್ಗಲು ಕಳ್ಳರು ಪ್ರಯತ್ನಿಸಿದ್ದಾರೆ. ಬಾಗಿಲು ಮುರಿಯುವ ವೇಳೆ ಮನೆಯಾಕೆ ಎಚ್ಚರಗೊಂಡಿದ್ದಾರೆ. ಮಹಿಳೆಯ ಬೊಬ್ಬೆ ಮತ್ತು ಆಕೆ ಫೋನ್ ಕರೆ ಮಾಡುತ್ತಿರುವುದನ್ನು ಗಮನಿಸಿದ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಘಟನಾ ಸ್ಥಳಕ್ಕೆ ಕುಂದಾಪುರದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಕಳ್ಳರ ಕೃತ್ಯ ಸೆರೆಯಾಗಿದೆ.

