Kundapra.com ಕುಂದಾಪ್ರ ಡಾಟ್ ಕಾಂ

ಪೊಲೀಸ್ ಕ್ರೀಡಾಕೂಟ: 100ಮೀ ಓಟದಲ್ಲಿ ಶಂಕರ್‌ ದ್ವಿತೀಯ ಸ್ಥಾನ ಹಾಗೂ 200ಮೀ ಓಟದಲ್ಲಿ ಪ್ರಥಮ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಎಆರ್‌ಎಸ್‌ಐ ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ 45 ವರ್ಷ ಮೇಲ್ಪಟ್ಟ ವರ್ಗದಲ್ಲಿ 100ಮೀ ಓಟದಲ್ಲಿ ಶಂಕರ್ ಪೂಜಾರಿ ಅವರು ದ್ವಿತೀಯ ಸ್ಥಾನ ಹಾಗೂ 200ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಮೂಲತಃ ಬೈಂದೂರು ತಾಲೂಕು ಬಿಜೂರಿನವರಾದ ಶಂಕರ ಪೂಜಾರಿ ಅವರು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ್ದು, ಓಟ, ರಿಲೇ ಮೊದಲಾದ ವಿಭಾಗದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ತನಕವೂ ಭಾಗವಹಿಸಿದ್ದಾರೆ.

2014ರಲ್ಲಿ ನಡೆದ 26ನೇ ಮಲೇಷಿಯಾ ಅಥ್ಲೆಟಿಕ್ ಚಾಂಪಿಯನ್’ಶಿಪ್’ನಲ್ಲಿ 2 ಚಿನ್ನ ಹಾಗೂ ಎರಡು ಬೆಳ್ಳಿಯ ಪದಕ ಗೆದ್ದಿದ್ದರು ಹಾಗೂ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟ್ ಸ್ಪೋರ್ಟ್ಸ್ 2021 ಕ್ರೀಡಾಕೂಟ 100 ಹಾಗೂ 200 ಮೀಟರ್ ಓಟದ ಸ್ವರ್ಧೆಯಲ್ಲಿ ಅವರು ಬೆಳ್ಳಿಯ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಶಂಕರ ಪೂಜಾರಿ ಅವರು ಪ್ರಸ್ತುತ ಅವರು ಯಡ್ತಾಡಿ ಸೈಬ್ರಕಟ್ಟೆಯಲ್ಲಿ ನೆಲೆಸಿದ್ದಾರೆ.

ಅವರಿಗೆ ಮಾನ್ಯ ಡಿಎಸ್‌ಪಿ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version