Site icon Kundapra.com ಕುಂದಾಪ್ರ ಡಾಟ್ ಕಾಂ

ವಿದ್ಯಾರ್ಥಿವೇತನ ಸೌಲಭ್ಯ: ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಂದನೇ ತರಗತಿಯಿಂದ ಎಸ್.ಎಸ್.ಎಲ್.ಸಿ ವರೆಗಿನ ವಿದ್ಯಾರ್ಥಿಗಳು ವೆಬ್‌ಸೈಟ್  https://ssp.postmatric.karnataka.gov.in/ssppre/ ನಲ್ಲಿ ಹಾಗೂ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಥಿಗಳು ವೆಬ್‌ಸೈಟ್  https://ssp.postmatric.karnataka.gov.in/post_sa/signin.aspx  ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Exit mobile version