ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಡಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಪಂಚವರ್ಣ ಸಂಘಟನೆ ಕೋಟ ಇವರ ಸಂಯೋಜನೆಯೊಂದಿಗೆ ಶಿಶು ಅಭಿವೃದ್ದಿ ಯೋಜನೆ ಬ್ರಹ್ಮಾವರ, ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ಹಾಗೂ ಎಸ್‌ಎಲ್‌ಆರ್‌ಎಂ ಘಟಕ ಕೋಡಿ ಇವರ ಸಹಯೋಗದೊಂದಿಗೆ ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ, ಸದಸ್ಯ ಪ್ರಭಾಕರ್ ಮೆಂಡನ್ ಮತ್ತು ಕೃಷ್ಣ ಪೂಜಾರಿಯವರ ಮಾರ್ಗದರ್ಶನದಲ್ಲಿ ಮನೆಗೊಂದು ಗಿಡ ನೆಡುವ 2ನೇ ವರ್ಷದ ಮೂರು ತಿಂಗಳ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಹೊಸಬೆಂಗ್ರೆ ಪರಿಸರದಲ್ಲಿ ಕೋಡಿ ಮೀನುಗಾರಿಕೆ ಸೊಸೈಟಿ ನಿರ್ದೇಶಕ ಲಕ್ಷ್ಮಣ್ ಸುವರ್ಣ ಮನೆಯಲ್ಲಿ ಗಿಡ ನಡುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮ, ಮಾಜಿ ಸಂಜೀವಿನಿ ಅಧ್ಯಕ್ಷೆ ದೀಪಾ ಆರ್. ಖಾರ್ವಿ, ಕೋಡಿಕನ್ಯಾನ ಅಂಗನವಾಡಿ ಕಾರ್ಯಕರ್ತೆ ಪ್ರೀತಿ ಎಸ್. ಹಾಗೂ ಕೋಡಿತಲೆ ಅಂಗನವಾಡಿ ಕಾರ್ಯಕರ್ತೆ ನಿರೋಷ, ಎಸ್‌ಎಲ್‌ಆರ್‌ಎಂ ಸಿಬ್ಬಂದಿ ಕಿರಣ್ ಪುತ್ರನ್, ಸ್ತ್ರೀ ಶಕ್ತಿ ಸಂಘದ ಸದಸ್ಯೆ ಸುಮತಿ, ಜ್ಯೋತಿ, ಸುಜಾತ, ಕುಸುಮ ಹಾಗೂ ಸ್ಥಳೀಯರು ಭಾರತಿ, ಸವಿತಾ ಪುಟಾಣಿಗಳು ಶ್ರೀನಿಧಿ, ಕೌಶಿಕ್ ಉಪಸ್ಥಿತರಿದ್ದರು.
ಹೊಸಬೆಂಗ್ರೆ ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್. ಕುಂದರ್ ವರ ಸಹಕಾರ ನೀಡಿ ಕಾರ್ಯಕ್ರಮ ನಿರ್ವಹಿಸಿದರು.

