Site icon Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ: ಪಿಕ್‌ಅಪ್ ವಾಹನ ಡಿಕ್ಕಿಯಾಗಿ ಸ್ಕೂಟರ್‌ ಸವಾರ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದು ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮರವಂತೆ ಬಸ್ ನಿಲ್ದಾಣದ ಸಮೀಪದ ಜಂಕ್ಷನ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮರವಂತೆಯ ಬೆಟ್ಟಿನಮನೆ ನಿವಾಸಿ ಲಕ್ಷ್ಮಣ ಪೂಜಾರಿ (48) ಮೃತಪಟ್ಟವರು.

ಅವರು ಸ್ಕೂಟರ್‌ನಲ್ಲಿ ತ್ರಾಸಿ ಕಡೆಯಿಂದ ಮರವಂತೆಗೆ ಬಂದು ರಾಷ್ಟ್ರೀಯ ಹೆದ್ದಾರಿ ಬಸ್ ನಿಲ್ದಾಣದ ಸಮೀಪ ಬೈಕ್ ಯೂಟರ್ನ್ ತೆಗೆದುಕೊಳ್ಳುತ್ತಿರುವಾಗ ಕುಂದಾಪುರ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್‌ ಸವಾರ ಲಕ್ಷ್ಮಣ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದರು.

ಗಂಗೊಳ್ಳಿ ಪೊಲೀಸ್ ಅಪರಾಧ ವಿಭಾಗದ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Exit mobile version