Site icon Kundapra.com ಕುಂದಾಪ್ರ ಡಾಟ್ ಕಾಂ

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್: ಮಾದಕ ವ್ಯಸನ ಮುಕ್ತ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ
ಕುಂದಾಪುರ:
ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್. ಇ ಸ್ಕೂಲ್‌ನಲ್ಲಿ ಮಾದಕ ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಯುವ ಪೀಳಿಗೆಯು ಮಾದಕ ವ್ಯಸನದಿಂದ ದೂರವಿದ್ದು ತಮ್ಮ ಅಮೂಲ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.

ಶಾಲಾ ಪ್ರಾಂಶುಪಾಲ ನಿತಿನ್ ಡಿ ಅಲ್ಮೇಡಾ ಅವರು ಮಾದಕ ವ್ಯಸನದ ಬಗ್ಗೆ ವಿವರಿಸಿದರು. ವಿವಿಧ ಮಾದಕ ಪದಾರ್ಥಗಳ ಕುರಿತು ತಿಳಿಸಿ ಅದರ ಸೇವನೆಯಿಂದ ಮನುಷ್ಯನ ಮೆದುಳಿನ ಮೇಲಾಗುವ ಪರಿಣಾಮ ಹಾಗೂ ಅನಾಹುತಗಳ ಬಗ್ಗೆ ನಿದರ್ಶನಗಳೊಂದಿಗೆ ವಿವರಿಸಿದರು.

ವಿದ್ಯಾರ್ಥಿಗಳು ಇಂತಹ ಮಾದಕ ವಸ್ತುಗಳ ಕುರಿತು ಅರಿವನ್ನು ಹೊಂದಿದ್ದು ಅದರಿಂದ ದೂರವಿರಬೇಕು ಎಂದು ತಿಳಿಸಿದರು. ಇದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಬಹುದು ಎಂದು ತಿಳಿಸಿದರು. ವಿದ್ಯಾರ್ಥಿಗಳು ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ಪ್ರಾಂಶುಪಾಲ ನಿತಿನ್ ಡಿ’ ಅಲ್ಮೇಡಾ ಕಾರ್ಯಕ್ರಮ ನಿರೂಪಿಸಿದರು.

Exit mobile version