ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಶಾಲೆಗೆ ಬಸ್ ವ್ಯವಸ್ಥೆಯನ್ನು ಮಾಡುವುದರ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಅವರು ಈ ಶಾಲೆಯ ಹಳೆವಿದ್ಯಾರ್ಥಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷರು,ಪದಾಧಿಕಾರಿಗಳು, ಸರ್ವಸದಸ್ಯರು,ಶಾಲಾ ಮುಖ್ಯ ಶಿಕ್ಷಕಿ ಹಾಗೂ ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

