ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಕಬಡ್ಡಿ ಸ್ಪರ್ಧೆಗಳನ್ನು ಜರುಗಿತು.
ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳಲ್ಲಿ ಕಬಡ್ಡಿ ಆಟ ಯೋಗಕ್ಕೆ ಸಂಬಂಧಿಸಿದ ಆಟ. ಇಲ್ಲಿ ಉಸಿರಾಟದ ಮೇಲೆ ಹಿಡಿತವಿರಬೇಕು. ತಂಡದ ಪ್ರತಿಯೊಬ್ಬರ ಪ್ರಾಮಾಣಿಕ ಪ್ರಯತ್ನಬೇಕು. ಏಕಾಗ್ರತೆಯನ್ನೂ ಬೆಳೆಸುವ ಆಟ. ಸ್ಪರ್ಧೆ ಎಂದರೆ ಸೋಲು ಗೆಲುವು ಇದ್ದೇ ಇರುವುದು. ಸ್ಪರ್ಧೆಗಳಲ್ಲಿ ಪ್ರಾಮಾಣಿಕವಾಗಿ ಆಡುವುದೇ ಮುಖ್ಯ. ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
14 ವರ್ಷದೊಳಗಿನ ವಯೋಮಿತಿಯ ಹುಡುಗರ ವಲಯ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ ಪ್ರಥಮ ಸ್ಥಾನವನ್ನು, ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಸುಳ್ಯ ದ್ವಿತೀಯ ಸ್ಥಾನವನ್ನು, ಶಾರದಾ ವಸತಿ ಶಾಲೆ, ಕುಂಜಿಬೆಟ್ಟು, ಉಡುಪಿ ತೃತೀಯ ಸ್ಥಾನವನ್ನು ಪಡೆದುಕೊಂಡಿತು.
14 ವರ್ಷದೊಳಗಿನ ವಯೋಮಿತಿಯ ಹುಡುಗಿಯರ ವಲಯ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ ಪ್ರಥಮ ಸ್ಥಾನವನ್ನು, ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಸುಳ್ಯ ದ್ವಿತೀಯ ಸ್ಥಾನವನ್ನು, ಶಾರದಾ ವಸತಿ ಶಾಲೆ, ಕುಂಜಿಬೆಟ್ಟು, ಉಡುಪಿ ತೃತೀಯ ಸ್ಥಾನವನ್ನು ಪಡೆದುಕೊಂಡಿತು.
17 ವರ್ಷದೊಳಗಿನ ವಯೋಮಿತಿಯ ಹುಡುಗರ ವಲಯ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ ಪ್ರಥಮ ಸ್ಥಾನವನ್ನು, ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಸುಳ್ಯ ದ್ವಿತೀಯ ಸ್ಥಾನವನ್ನು, ಶಾರದಾ ವಸತಿ ಶಾಲೆ, ಕುಂಜಿಬೆಟ್ಟು, ಉಡುಪಿ ತೃತೀಯ ಸ್ಥಾನವನ್ನು ಪಡೆದುಕೊಂಡಿತು.
17 ವರ್ಷದೊಳಗಿನ ವಯೋಮಿತಿಯ ಹುಡುಗಿಯರ ವಲಯ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ ಪ್ರಥಮ ಸ್ಥಾನವನ್ನು, ಶಾರದಾ ವಸತಿ ಶಾಲೆ, ಕುಂಜಿಬೆಟ್ಟು, ಉಡುಪಿ ದ್ವಿತೀಯ ಸ್ಥಾನವನ್ನು, ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಸುಳ್ಯ ತೃತೀಯ ಸ್ಥಾನವನ್ನು ಪಡೆದುಕೊಂಡಿತು.
ನಿರ್ಣಾಯಕರಾಗಿ ಉಮೇಶ ನಾಯ್ಕ್, ಅರುಣ ನಾಯ್ಕ್, ಸೀತಾರಾಮ್, ದಿವಾಕರ, ಸುಧಾಕರ ಶೆಟ್ಟಿ ಅವರು ಭಾಗವಹಿಸಿದ್ದರು.
ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಆಡಳಿತಾಧಿಕಾರಿಗಳಾದ ವೀಣಾ ರಶ್ಮಿ ಎಮ್., ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ವಲಯ ಮಟ್ಟದ ಶಾಲೆಗಳ ದೈಹಿಕ ಶಿಕ್ಷಕರು ಮತ್ತು ಸ್ಪರ್ಧಾರ್ಥಿಗಳಾದ ವಿದ್ಯಾರ್ಥಿಗಳೂ ಉಪಸ್ಥಿತರಿದ್ದರು.
ತನುಶ್ರೀ ಕಾರ್ಯಕ್ರಮವನ್ನು ನಿರೂಪಿಸಿ, ಅನನ್ಯಾ ಸ್ವಾಗತಿಸಿ, ಕೃಷವ್ ಧನ್ಯವಾದಗಳನ್ನು ಸಮರ್ಪಿಸಿದರು.

