Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಹಡಿಲು ಭೂಮಿಯಲ್ಲಿ 3 ತಿಂಗಳುಗಳ ಕಾಲ ವ್ಯವಸಾಯ ಪದ್ಧತಿ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಿ.ವಿ. ರಾಮನ್ ವಿಜ್ಞಾನ ಮತ್ತು ಗಣಿತ ಹಾಗೂ ಹಸಿರು ಇಕೋ ಕ್ಲಬ್ ಇವರ ಜಂಟಿ ಆಶ್ರಯದಲ್ಲಿ ರೋಟರಿ ಜಿಲ್ಲಾ ಯೋಜನೆಯ ಅಡಿಯಲ್ಲಿ ಬರುವ ಪರಿಸರ ಸಂರಕ್ಷಣೆ ಕಾರ್ಯಕ್ರಮದ ಅಂಗವಾಗಿ ಹಡಿಲು ಭೂಮಿಯಲ್ಲಿ ಮೂರು ತಿಂಗಳುಗಳ ಕಾಲ ವ್ಯವಸಾಯ ಪದ್ಧತಿ ಕಾರ್ಯಕ್ರಮ ಗಂಗೊಳ್ಳಿಯಲ್ಲಿ ಗುರುವಾರ ನಡೆಯಿತು.

ಗಂಗೊಳ್ಳಿಯ ಯುವ ಕೃಷಿಕ ವಿಜಯ ಪೂಜಾರಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಟರಿ ಡಿಸ್ಟ್ರಿಕ್ಟ್ ಲೀಡರ್ ಜನಾರ್ದನ್ ಪೆರಾಜೆ ಹಾಗೂ ಕೆ. ರಾಮನಾಥ್ ನಾಯಕ್ ಭತ್ತದ ಸಸಿ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ, ಸದಸ್ಯರಾದ ಬಿ.ಲಕ್ಷ್ಮೀಕಾಂತ ಮಡಿವಾಳ, ಟಿ.ದಿನಕರ್ ಶೆಣೈ, ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version