Site icon Kundapra.com ಕುಂದಾಪ್ರ ಡಾಟ್ ಕಾಂ

ಬಿಜೆಪಿ ಸುಳ್ಳಿನ ರಾಜಕಾರಣ ಜನ ಅರ್ಥೈಸಿಕೊಂಡಿದ್ದಾರೆ: ಕೆ. ಜಯಪ್ರಕಾಶ್ ಹೆಗ್ಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಕೋಟತಟ್ಟು ಗ್ರಾಮ ಪಂಚಾಯತ್ ಎದುರು ಬಿಜೆಪಿಯವರ ಸುಳ್ಳಿನ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆಯನ್ನು ನಡೆಸಿತು.

ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಜಯಪ್ರಕಾಶ್ ಹೆಗಡೆ ಅವರು ಭಾಗವಹಿಸಿ ಬಿಜೆಪಿಯವರು ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ. ಜನರ ದಿಕ್ಕು ತಪ್ಪಿಸುವ ಪ್ರತಿಭಟನೆಗಳು ಬಿಜೆಪಿಯಿಂದಾಗುತ್ತಿದೆ ಎಂದು ಬಿಜೆಪಿ ಇತ್ತೀಚಿಗೆ ನಡೆಸಿದ ಪ್ರತಿಭಟನೆಯ ಬಗ್ಗೆ ವಿವರಣೆ ನೀಡಿ, ಸಾರ್ವಜನಿಕರಿಗೆ ಸತ್ಯ ವಿಚಾರವನ್ನು ತೆರೆದಿರಲ್ಲದೆ ಗ್ಯಾರಂಟಿ ಯೋಜನೆಗಳು ಮತ್ತು ಕಾಂಗ್ರೆಸ್ ಸರ್ಕಾರದ ಅವಧಿಗಳಲ್ಲಿ ಜಾರಿಗೆ ತಂದಂತ ಎಲ್ಲಾ ಯೋಜನೆಗಳನ್ನು ಜನರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಂಕರ್ ಎ. ಕುಂದರ್, ಕೋಟ ವ್ಯವಸಾಯಕ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ, ಗ್ರಾಮೀಣ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸಾಯಿರಬಾನು, ರೋಬರ್ಟ್ ಡಿಸೋಜ, ಮುಖಂಡರಾದ ರವಿ ಪೂಜಾರಿ, ರತ್ನಾಕರ ಶ್ರೀಯನ್ ವಿವಿಧ ಘಟಕದ ಅಧ್ಯಕ್ಷರುಗಳು ಭಾಗವಹಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಕೋಟತಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆಯಲ್ಲಿ ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಂಕರ್ ಎ ಕುಂದರ್, ಕೋಟ ವ್ಯವಸಾಯಕ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ, ಗ್ರಾಮೀಣ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಇದ್ದರು.

Exit mobile version