Site icon Kundapra.com ಕುಂದಾಪ್ರ ಡಾಟ್ ಕಾಂ

ಬಾಲ ಪ್ರತಿಭೆ ಸಂಜಿತ್ ಎಂ. ದೇವಾಡಿಗ ಅವರಿಗೆ ಸನ್ಮಾನ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಉಡುಪಿ ವಲಯ ಇವರ ಸಹಯೋಗದಲ್ಲಿ ಇತ್ತೀಚೆಗೆ ಹಿರಿಯಡ್ಕದಲ್ಲಿ ನಡೆದ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಗಾರ 2025 ರಲ್ಲಿ ಗಂಗೊಳ್ಳಿಯ ಸಾಕ್ಸೋಫೋನ್ ಮತ್ತು ಚಿತ್ರಕಲಾ ಬಾಲ ಪ್ರತಿಭೆ ಸಂಜಿತ್ ಎಮ್. ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಮ್ಮು-ಕಾಶ್ಮೀರ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಪ್ರಸಾದ್, ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಮಂಜುನಾಥ ಭಟ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಲೋಕೇಶ್ ಸಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಯಲ್ಲಮ್ಮ ಕೃಷಿ ಅರ್ಥಶಾಸ್ತ್ರಜ್ಞರಾದ ಎನ್. ಎಸ್. ಶೆಟ್ಟಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ಯೋಗ ನರಸಿಂಹ ಸ್ವಾಮಿ ಕೆ. ಎಂ., ಶಾಲಾ ಶಿಕ್ಷಣ ಇಲಾಖೆಯ ನಾಗರಾಜ್, ಎಸ್‌ಡಿಎಂಸಿ ಉಪಾಧ್ಯಕ್ಷರಾದ ಬಿಎಲ್ ವಿಶ್ವಾಸ ಭಟ್, ಉಪ ಪ್ರಾಂಶುಪಾಲ ಪ್ರಕಾಶ್ ಪ್ರಭು, ತಾಲೂಕು ಚಿತ್ರಕಲಾ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಬಿ. ಪಿ., ಹಾಗೂ ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಕಡಬ ಮೊದಲಾದವರು ಉಪಸ್ಥಿತರಿದ್ದರು.

ಈತ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಅವರು ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಹಾಗೂ ಸ್ಯಾಕ್ಸೋಫೋನ್ ಕಲಾವಿದ ಮಾಧವ ಎಮ್. ದೇವಾಡಿಗ ಮತ್ತು ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ.

Exit mobile version