Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ ವತಿಯಿಂದ ಸಮುದ್ರ ಪೂಜೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ ವತಿಯಿಂದ ಉಪ್ಪುಂದ ಮಡಿಕಲ್ ಸಮುದ್ರ ತೀರದಲ್ಲಿ ಪುರೋಹಿತ ರಾಘವೇಂದ್ರ ಭಟ್ ನೇತೃತ್ವದಲ್ಲಿ ಸಮುದ್ರ ಪೂಜೆ ನೆರವೇರಿಸಲಾಯಿತು.

ಮೀನುಗಾರಿಕಾ ಋತುವು ಸಂಪದ್ಭರಿತವಾಗಿರುವುದರೊಂದಿಗೆ ಮೀನುಗಾರಿಕೆ ಸಂದರ್ಭ ಯಾವುದೇ ಪ್ರಕೃತಿ ವಿಕೋಪ, ಮೀನುಗಾರಿಕೆ ಸಮಯದಲ್ಲಿ ಅವಘಡಗಳು ಸಂಭವಿಸದಂತೆ ಅನುಗ್ರಹ ಕೋರಿ ಕುಲ ದೇವರಾದ ಶೃಂಗೇರಿ ಶಾರದಾಂಬೆ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿ, ಮರುದಿನ ಗ್ರಾಮದ ದೇವರುಗಳಿಗೆ ಪೂಜೆ ಸಲ್ಲಿಸಿ ತಂದ ಪ್ರಸಾದ ಹಾಗೂ ಹಾಲು ಹಣ್ಣು ಫಲ ಪುಷ್ಪಗಳನ್ನು ಈ ದಿನ ಸಮುದ್ರ ರಾಜನಿಗೆ ಅರ್ಪಿಸಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ರಾಣಿಬಲೆ ಮೀನುಗಾರರ ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಖಾರ್ವಿ, ಉಪಾಧ್ಯಕ್ಷ ತಿಮ್ಮಪ್ಪ ಖಾರ್ವಿ, ಅರಮಕೋಡಿ ಶ್ರೀ ಈಶ್ವರ ದೇವಸ್ಥಾನದ ಅಧ್ಯಕ್ಷ ಎಚ್. ಸುರೇಶ್ ಖಾರ್ವಿ, ರಾಣಿಬಲೆ ಮೀನುಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ಖಾರ್ವಿ, ಕೋಶಾಧಿಕಾರಿ ಬಿ. ನಾಗೇಶ ಖಾರ್ವಿ, ಜತೆ ಕಾರ್ಯದರ್ಶಿ ಸೋಮಶೇಖರ ಖಾರ್ವಿ, ಕಾರ್ಯಕಾರಿ ಸದಸ್ಯರಾದ ಎ. ಶ್ರೀನಿವಾಸ ಖಾರ್ವಿ, ಎಸ್. ಕೃಷ್ಣಖಾರ್ವಿ, ರಾಜೇಂದ್ರ ಖಾರ್ವಿ, ಶಂಕರ ಖಾರ್ವಿ, ನವೀನ ಖಾರ್ವಿ, ಶರತ್ ಖಾರ್ವಿ, ಹಸಿ ಮೀನು ವ್ಯಾಪಾರಸ್ಥರು, ಮೀನುಗಾರರು ಉಪಸ್ಥಿತರಿದ್ದರು.

Exit mobile version