Site icon Kundapra.com ಕುಂದಾಪ್ರ ಡಾಟ್ ಕಾಂ

ಆಸಾಡಿ ಒಡ್ರ್ ಸಾಧಕ ಪುರಸ್ಕಾರಕ್ಕೆ ಸಾಂಸ್ಕೃತಿಕ ಚಿಂತಕಿ ಭಾರತಿ ವಿ. ಮಯ್ಯ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ನಾಲ್ಕನೇ ವರ್ಷದ “ಆಸಾಡಿ ಒಡ್ರ್”ಸಾಧಕ ಪುರಸ್ಕಾರಕ್ಕೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗುರುತಿಸಲ್ಪಟ್ಟ ಮಣೂರು ಭಾರತಿ ವಿಷ್ಣುಮೂರ್ತಿ ಮಯ್ಯ ಆಯ್ಕೆಗೊಳಿಸಲಾಗಿದೆ.

ಅಗಸ್ಟ್ 10ರ ಭಾನುವಾರ ಬೆಳಿಗ್ಗೆ 9 ರಿಂದ ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಹಮ್ಮಿಕೊಳ್ಳಲಿರುವ “ಆಸಾಡಿ ಒಡ್ರ್”ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಿದೆ.

ವಿಶೇಷ ಆಹ್ವಾನಿತರಾಗಿ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಕುಂದಗನ್ನಡ ರವಿ ಬಸ್ರೂರು ಹಾಗೂ ಕುಂದಗನ್ನಡದ ಲೇಖಕಿ ಪೂರ್ಣಿಮಾ ಕಮಲಶಿಲೆ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮೀಣ ತಿನಿಸುಗಳು, ಪರಿಕರ ಪ್ರದರ್ಶನ, ಸ್ಪರ್ಧೆ, ಅನಾಥಾಶ್ರಮಕ್ಕೆ ನೆರವು, ಸ್ನೇಹಕೂಟ ಮಣೂರು ಇವರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.

ಗೆಳೆಯರ ಬಳಗ ಹಂದಟ್ಟು ಹಾಗೂ ಹಂದಟ್ಟು ಮಹಿಳಾ ಬಳಗ ಕೋಟ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version