Site icon Kundapra.com ಕುಂದಾಪ್ರ ಡಾಟ್ ಕಾಂ

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಎಸ್.ಎಸ್.ಪಿ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ ಪರಿಶಿಷ್ಟ ಜಾತಿ ವೆಬ್‌ಸೈಟ್ SW.KAR.NIC.IN, ಪರಿಶಿಷ್ಟ ಪಂಗಡ TW.KAR.NIC.IN ಅಥವಾ http://ssp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಪಂಗಡದ ಎಲ್ಲಾ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟ್ರೇಷನ್ ಮಾಡುವುದು ಕಡ್ಡಾಯವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884, ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version