Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕೃಷಿ ಇಲಾಖೆಯ ವತಿಯಿಂದ  2025-26ನೇ ಸಾಲಿನ ಆತ್ಮಯೋಜನೆಯಡಿ ಇಲಾಖೆಯ ಇತರೆ ಯೋಜನೆಗಳಾದ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗೆ ಸಮಾನಾಂತರವಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿ, ರೈತರ ಸಾಧನೆಯನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮವಿದೆ.

ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಯ್ಕೆಯಾದ ಜಿಲ್ಲೆಯಒಟ್ಟಾರೆ 10 ಮಂದಿ ರೈತರಿಗೆ (ತಲಾರೂ.25000/-) ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಯನ್ನು ಆಯ್ಕೆಯಾದ ಆಯಾ ತಾಲ್ಲೂಕಿನ ಒಟ್ಟಾರೆ 5 ಮಂದಿ ರೈತರಿಗೆ (ತಲಾ ರೂ.10000/-) ಜಿಲ್ಲಾ ಮಟ್ಟದಆಯ್ಕೆ ಸಮಿತಿಯಲ್ಲಿ ಮಂಡಿಸಿ ತೀರ್ಮಾನದಂತೆ ವಿತರಿಸಲಾಗುವುದು.

ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರು ಹಾಗೂ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರಿ ಕಛೇರಿಯಿಂದ ನಿಗದಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ 15.08.2025 ರೊಳಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಪ್ರಶಸ್ತಿಯ ಆಯ್ಕೆಗೆ ಸಂಬಂಧಿಸಿದ ಷರತ್ತುಗಳು:

> ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳಿಂದ ಈಗಾಗಲೇ ಸಮಾನಾಂತರವಾದ ಪ್ರಶಸ್ತಿಗಳನ್ನು ಪಡೆದಲ್ಲಿ ಅಂತಹ ರೈತರು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

> ರೈತರು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರಬೇಕು.

> ಅರ್ಜಿ ಸಲ್ಲಿಸುವ ರೈತರು ಸ್ವಂತ ಜಮೀನು ಹೊಂದಿದ್ದು, ಕನಿಷ್ಠ ಎಕ್ರೆ ವಿಸ್ತೀರ್ಣ ಹೊಂದಿರಬೇಕು.

> ಜಿಲ್ಲಾ ಮಟ್ಟದಲ್ಲಿ 10 ಹಾಗೂ ತಾಲ್ಲೂಕು ಮಟ್ಟದಲ್ಲಿ 5 ಪ್ರಶಸ್ತಿಗಳನ್ನು ಜಿಲ್ಲಾ ಮಟ್ಟದಆಯ್ಕೆ ಸಮಿತಿಯ ನಿರ್ಣಯದಂತೆ ನೀಡಲಾಗುವುದು. ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ.

> ಸ್ವೀಕರಿಸಿದ ಅರ್ಜಿಗಳನ್ನು ಕ್ಷೇತ್ರ ಪರಿಶೀಲನಾ ತಂಡವು ಪರಿಶೀಲಿಸಿ ಸರಾಸರಿ ಅಂಕದ ಜೇಷ್ಠತೆಯ ಆಧಾರದ ಮೇಲೆ ರೈತರನ್ನು ಪ್ರಶಸ್ತಿಯ ಆಯ್ಕೆಗೆ ಪರಿಗಣಿಸಲಾಗುವುದು.

> ಸಾವಯವ ಕೃಷಿಯನ್ನು ಅಳವಡಿಸಿಕೊಂಡಿರುವ ರೈತರು ಚಾಲ್ತಿಯಲ್ಲಿರುವ ವೈಯಕ್ತಿಕ ಸಾವಯವ ಪ್ರಮಾಣೀಕರಣ ದೃಢೀಕರಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸುವುದು.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version