Site icon Kundapra.com ಕುಂದಾಪ್ರ ಡಾಟ್ ಕಾಂ

ನಾವುಂದ ಸ.ಪ.ಪೂ ಕಾಲೇಜಿನಲ್ಲಿ ರೇಂಜರ್ಸ್ ಮತ್ತು ರೋವರ್ಸ್ ಘಟಕಗಳ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಇಲ್ಲಿನ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಇಕೋ ಕ್ಲಬ್, ಸ್ಪೋರ್ಟ್ಸ್ ಕ್ಲಬ್, ಸಾಂಸ್ಕತಿಕ ಸಂಘ, ರೇಂಜರ್ಸ್ ಮತ್ತು ರೋವರ್ಸ್ ಘಟಕಗಳ ಉದ್ಘಾಟನೆ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ಅವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಮಕೃಷ್ಣ ನರ್ಸಿಂಗ್ ಹೋಮ್ ಕುಂದಾಪುರ ಇಲ್ಲಿನ ಪ್ರಧಾನ ಸಲಹೆಗಾರರು ಮತ್ತು ಸಮಗ್ರ ಚರ್ಮರೋಗ ತಜ್ಞರಾದ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಅಜಿತ್ ಎಂ. ಅವರಿಂದ ಮಕ್ಕಳಿಗೆ ಪ್ರೇರಣಾತ್ಮಕ ಉಪನ್ಯಾಸವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಚಂದ್ರಶೇಖರ ಲಗಳೂರು, ದೈಹಿಕ ಶಿಕ್ಷಣ ಉಪನ್ಯಾಸಕರಾದ ಜೀವನ್ ಕುಮಾರ್ ಶೆಟ್ಟಿ, ಅರ್ಥಶಾಸ್ತ್ರ ಉಪನ್ಯಾಸಕರಾದ ನೇತ್ರಾವತಿ, ಕನ್ನಡ ಉಪನ್ಯಾಸಕರಾದ ನಾಗೇಶ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಉಮೇಶ್ ಕುಂದರ್ ಮತ್ತು ಲೋಕೇಶ್, ಮೆಡಿಕಲ್ ರೆಪ್ರೆಸೆಂಟೇಟಿವ್ ಸುಕುಮಾರ  ಉಪಸ್ಥಿತರಿದ್ದರು.

ಉಪನ್ಯಾಸಕಿ ಸಾವಿತ್ರಿ ಎಸ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಣಿತಶಾಸ್ತ್ರ ಇತಿಹಾಸ ಉಪನ್ಯಾಸಕರಾದ ಗಣೇಶ್ ನಿರೂಪಿಸಿ, ಭೌತಶಾಸ್ತ್ರ ಉಪನ್ಯಾಸಕರಾದ ಗಾಯತ್ರಿ ಭಟ್ ಸ್ವಾಗತಿಸಿ, ಆಂಗ್ಲ ಭಾಷೆ ಉಪನ್ಯಾಸಕರಾದ ವೀರಭದ್ರಪ್ಪ ದಾವಣಗೆರೆ ವಂದಿಸಿದರು.

Exit mobile version