ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಹಟ್ಟಿಅಂಗಡಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಗುರುಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಮ್ಮ ಶಾಲೆಯ ಸಂಸ್ಕೃತ ಶಿಕ್ಷಕರಾದ ರಾಮಕೃಷ್ಣ ಉಡುಪರವರು ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗುರುಪೂರ್ಣಿಮೆಯ ಹಿನ್ನೆಲೆ ಹಾಗೂ ಗುರುವಿನ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.
ನಂತರ ಶಾಲಾ ಶಿಕ್ಷಕಿಯರು ಗುರುವಿಗೆ ಗೌರವ ಸಲ್ಲಿಸುವ ಹಾಡನ್ನು ಹಾಡಿದರು. ಶಂಕರಾಚಾರ್ಯ ವಿರಚಿತ ಗುರ್ವಷ್ಟಕವನ್ನು ವಿದ್ಯಾರ್ಥಿಗಳಿಗೆ ಕೇಳಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾನಿಯಾದ ಸುಜಾತಾ ಸದಾರಾಮ, ಶಿಕ್ಷಕ ವೃಂದದವರು ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

