Site icon Kundapra.com ಕುಂದಾಪ್ರ ಡಾಟ್ ಕಾಂ

ಆಕ್ಸಿಜನ್ ಪ್ರಮಾಣ ಹೆಚ್ಚಿಸಲು ಹಸಿರು ಜೀವ ಅತೀ ಅವಶ್ಯಕ: ಡಾ. ವಿದ್ವಾನ್ ವಿಜಯ ಮಂಜರ್

????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಪರಿಸರದಲ್ಲಿ ಆಕ್ಸಿಜನ್ ಪ್ರಮಾಣ ಹೆಚ್ಚಿಸಬೇಕು ಅದಕ್ಕಾಗಿ ಈಗಿಂದಿಗಲೇ ಗಿಡ ನಡುವ ಕಾಯಕಕ್ಕೆ ವೇಗ ನೀಡಿ ಎಂದು ಪಾಂಡೇಶ್ವರದ ಯೋಗ ಗುರುಕುಲದ ಮುಖ್ಯಸ್ಥ ಡಾ. ವಿದ್ವಾನ್ ವಿಜಯ ಮಂಜರ್ ಕರೆ ನೀಡಿದರು.

ಅವರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಪಾಂಡೇಶ್ವರ ಇವರ ಸಂಯೋಜನೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ ಇವರ ಸಹಭಾಗಿತ್ವದಡಿ 263ನೇ ಭಾನುವಾರ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಕೃತಕ ಆಕ್ಸಿಜನ್ ತೆಗೆದುಕೊಂಡ ದಿನಗಳನ್ನು ನೆನಪಿಸಿದ ಅವರು ಪಂಚವರ್ಣ ಸಂಘಟನೆಯವರು ಪ್ರಕೃತಿಗಾಗಿ ಪ್ರಜ್ವಲಿಸುವ ದೀಪದಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಇಂಥಹ ಸಂಘಟನೆಗಳಿಗೆ ನಮ್ಮದೊಂದು ಸೆಲ್ಯೂಟ್ ನೀಡಬೇಕಾಗಿದೆ. ಪರಿಸರಕ್ಕೆ ಪೂರಕವಾದ ಅಂಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡರೆ ಪ್ರಕೃತಿ ಉಳಿಸಿ ಬೆಳೆಸಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು. ಖ್ಯಾತ ಚಲನಚಿತ್ರನಟ ಎಸ್. ದೊಡ್ಡಣ್ಣ ಸಾಮಾಜಿಕ ಜಾಲ ತಾಣದ ಮೂಲಕ ಪ್ರಕೃತಿ ಸಂದೇಶ ನೀಡಿದರು.

ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಪಾಂಡೇಶ್ವರ ಇದರ ಅಧ್ಯಕ್ಷೆ ಶಾಂತಾ ಭಟ್, ಉಪಾಧ್ಯಕ್ಷೆ ಜೂಡಿತ್ ಪಿಕಾರ್ಡೊ, ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಮಾಜಿ ಅಧ್ಯಕ್ಷ ಅರವಿಂದ ಶರ್ಮ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಸಿಇಒ ಶ್ಯಾಮಲ ಪಾಂಡೇಶ್ವರ, ಸಹಾಯಕಿ ಸುಜಾತ ವೆಂಕಟೇಶ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ನಿರೂಪಿಸಿ ಪ್ರಾಸ್ತಾವನೆ ಸಲ್ಲಿಸಿದರು. ಪಂಚವರ್ಣದ ಮಹೇಶ್ ಬೆಳಗಾವಿ ಸ್ವಾಗತಿಸಿ, ಮಾಜಿಅಧ್ಯಕ್ಷ ಅಜಿತ್ ಆಚಾರ್ ವಂದಿಸಿದರು.

Exit mobile version