ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಹಾಗೂ ಖಜಾಂಚಿ ಕೆ. ಲಕ್ಷ್ಮೀನಾರಾಯಣ ಶೆಣೈ ಅವರ ಉಪಸ್ಥಿತಿಯಲ್ಲಿ 39ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.
ಪ್ರಾಂಶುಪಾಲರಾದ ಡಾ. ಅಶೋಕ ಕಾಮತ್ ಹಾಗೂ ಚಿನ್ಮಯಿ ಆಸ್ಪತ್ರೆಯ ಸುಮಾ ಉಮೇಶ್ ಪುತ್ರನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ಸನ್ಮಾನಿಸಿ ಬೆಳ್ಳೆಯ ಲೋಟವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು. 600ಕ್ಕಿಂತ ಅಧಿಕ ಅಂಕ ಪಡೆದ 60ವಿದ್ಯಾರ್ಥಿಗಳಿಗೆ 10ಗ್ರಾಂ ಬೆಳ್ಳಿಯ ನಾಣ್ಯವನ್ನು, ಡಿಸ್ಟಿಂಕ್ಷನ್ ಪಡೆದ 88 ವಿದ್ಯಾರ್ಥಿಗಳಿಗೆ 8ಗ್ರಾಂ ಬೆಳ್ಳಿಯ ನಾಣ್ಯವನ್ನು ನೀಡಿ ಪ್ರೋತ್ಸಾಹಿಸಲಾಯಿತು ಹಾಗೂ ಪಿ.ಯು.ಸಿ.ಯ ಸಾಧಕರನ್ನು ಸನ್ಮಾನಿಸಲಾಯಿತು.
ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಸುಮಾರು 14 ಬೋಧಕ ಬೋಧಕೇತರ ಸಿಬ್ಬಂದಿಯವರಿಗೆ ಬೆಳ್ಳಿಯ ಲೋಟವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು.
ಸಮಾರಂಭದಲ್ಲಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿ ದಿವ್ಯಾ, ಪ್ರೀತಿ, ನಝರತ್ ಹಾಗೂ ಸೌಮ್ಯ ನಾವಡ ಅವರು ನಿರೂಪಿಸಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಅವರು ಸರ್ವರನ್ನು ಸ್ವಾಗತಿಸಿ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜ ಅವರು ಧನ್ಯವಾದ ಸಮರ್ಪಿಸಿದರು.