Site icon Kundapra.com ಕುಂದಾಪ್ರ ಡಾಟ್ ಕಾಂ

ಜುಲೈ17ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜು.16: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 17ರಂದು ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.

ಉಳಿದಂತೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ಅಧಿಕ ಮಳೆ ಸಾಧ್ಯತೆಯಿದ್ದು ಹವಮಾನ ಇಲಾಖೆಯಿಂದ ಎಲ್ಲಾ ಅಲರ್ಟ್‌ ಘೋಷಿಸಿದೆ. ಮಳೆಗಾಲದಲ್ಲಿ ಸಾರ್ವಜನಿರು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ.

Exit mobile version