Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಹೊಲಿಗೆ ಯಂತ್ರ ವಿತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಗ್ರಾಮೀಣ ಕುಲ ಕಸುಬುದಾರರಿಗೆ ಆರ್ಥಿಕ ನೆರವು ನೀಡಲು ಹಾಗೂ ಸಾಮಾಜಿಕವಾಗಿ ಹಿಂದುಳಿದ ಬಡವರ್ಗದ ಜನರಿಗೆ ಗ್ರಾಮಗಳಲ್ಲಿಯೇ ಜೀವನಾಧಾರ ಕಲ್ಪಿಸಲು ಫಲಾನುಭವಿಗಳಿಗೆ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಅವರು ಶುಕ್ರವಾರದಂದು ತಾಲೂಕು ಪಂಚಾಯಿತ್‌ ಸಭಾಂಗಣದಲ್ಲಿ ನಡೆದ ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮದಲ್ಲಿ ಕಿಟ್ ವಿತರಿಸಿ ಮಾತನಾಡಿ, ತಾವು ಇದನ್ನು ಸಮರ್ಪಕವಾಗಿ ಕಿಟ್ ಅನ್ನು ಉಪಯೋಗಿಸಿಕೊಂಡು ಸ್ವಯಂ ಉದ್ಯೋಗವನ್ನು ಮಾಡುವ ಸಲುವಾಗಿ ಈ ಉದ್ದೇಶದಿಂದ ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹೊಲಿಗೆ ಯಂತ್ರ ವಿಸ್ತರಿಸಲಾಗುತ್ತಿದೆ.

ಜಿಲ್ಲಾ ಪಂಚಾಯತ್ ಉಡುಪಿ ಗ್ರಾಮೀಣ ಕೈಗಾರಿಕಾ ವಿಸ್ತರಣಾ ಅಧಿಕಾರಿ ಮಂಜುನಾಥ್ ಹೆಗಡೆ  ಉಪಸ್ಥಿತರಿದ್ದರು.

133 ಫಲಾನುಭವಿಗಳಿಗೆ 9 ವಿವಿಧ ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು.

Exit mobile version