Site icon Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಕೆಸರಲ್ಲೊಂದಿನದ ಸಂಭ್ರಮಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಆನಗಳ್ಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ  ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಕೃಷಿ ಚಟುವಟಿಕೆಗಳ ಕುರಿತು ಪ್ರಾಯೋಗಿಕ ಜ್ಞಾನವನ್ನು  ನೀಡಲು ಕೆಸರಲ್ಲೊಂದಿನ  ನೆಟ್ಟಿ ಎನ್ನುವ ವಿಶೇಷ ಕಾರ್ಯಕ್ರಮ ಆಯೋಜಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಅವರು ಚಾಲನೆ ನೀಡಿದರು. ಉಪ ಪ್ರಾಂಶುಪಾಲರಾದ ಸುಜಯ್ ಕೊಟೆಗಾರ್, ವಾಣಿಜ್ಯ ಶಾಸ್ತ್ರ ವಿಭಾಗದ ಇನ್ ಚಾರ್ಜ್  ಲತಾ ಪೈ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಕೆಸರು ಗದ್ದೆಯಲ್ಲಿ ಅನೇಕ ಮನೋರಂಜನಾ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಯಿತು. ತದನಂತರ ವಿದ್ಯಾರ್ಥಿಗಳಿಂದ ಗದ್ದೆ ನಾಟಿಯನ್ನು ಮಾಡಿಸುವುದರ ಮೂಲಕ  ನೆಟ್ಟಿಯ ಬಗ್ಗೆ ಪ್ರಾಯೋಗಿಕ ಮಾಹಿತಿಯನ್ನು ನೀಡಲಾಯಿತು.

Exit mobile version