ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾರ್ಥಿಗಳು ಅತ್ಯುತ್ತಮ ಸಿ.ಇ.ಟಿ ಮತ್ತು ನೀಟ್ ಕೋಚಿಂಗ್ ಪಡೆಯುವಂತಾಗಿರುವುದು ಸಂತಸ ತಂದಿದೆ. ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪ್ರಯತ್ನದಿಂದ ಅತ್ಯುತ್ತಮ ಫಲಿತಾಂಶ ಪಡೆದು ಒಳ್ಳೆಯ ಹೆಸರು ಮಾಡುವ ಆಶಯ ಹೊಂದಿದ್ದೇವೆ ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಕಾಲೇಜಿನ ಸಂಚಾಲಕರಾದ ಬಿ.ಎಮ್. ಸುಕುಮಾರ್ ಶೆಟ್ಟಿ ಹೇಳಿದರು.
ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಎಸಿಸಿಇ ಅಕಾಡೆಮಿಯ ಸಹಭಾಗಿತ್ವದಲ್ಲಿ ಆರಂಭವಾದ ಸಿಇಟಿ, ಎನ್‌ಇಇಟಿ, ಜೆಇಇ ಪರೀಕ್ಷಾ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಸೀತಾರಾಮ್ ನಕ್ಕತ್ತಾಯರವರು ತರಬೇತಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಎಸಿಸಿಇ ಅಕಾಡೆಮಿಯ ನಿರ್ದೇಶಕರಾದ ಲಾತವ್ಯ ಆಚಾರ್ಯ ಅವರು ವಿದ್ಯಾರ್ಥಿಗಳು ಉಪನ್ಯಾಸಕರೊಂದಿಗೋ, ತಂದೆತಾಯಿಯವರೊಂದಿಗೆ ಆತ್ಮೀಯತೆಯಲ್ಲಿ ಮಾತಾಡಿ ತಮ್ಮ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಬಹುದು ಎನ್ನುತ್ತಾ, ತರಬೇತಿಯ ರೂಪುರೇಷೆ ಮತ್ತು ಯೋಜನೆಗಳನ್ನು ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೀತೇಶ್ ಶೆಟ್ಟಿ, ಎಸಿಸಿಇ ಅಕಾಡೆಮಿಯ ಅಕ್ಷೋಭ್ಯ ಆಚಾರ್ಯ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಶರಧಿ ಪ್ರಾರ್ಥಿಸಿದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆಯಾದ ಜಾನೀಸ್ ನತಾಶಾ ಡಿಸೋಝಾ ಅವರು ನಿರೂಪಿಸಿ, ರಸಾಯನ ಶಾಸ್ತ್ರ ಉಪನ್ಯಾಸಕಿ ರೇವತಿ ಕಾಮತ್ ಧನ್ಯವಾದ ಸಲ್ಲಿಸಿದರು.

