Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಹೋಟೆಲ್ ಮ್ಯಾನೆಜ್‌ಮೆಂಟ್ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಸತಿಯುತ ಹೋಟೆಲ್ ಮ್ಯಾನೆಜ್‌ಮೆಂಟ್ ವೃತ್ತಿಪರ ತರಬೇತಿಯನ್ನು ಬೆಂಗಳೂರಿನ ಇನ್ಸಿಟಟ್ಯೂಟ್ ಆಫ್ ಹೋಟೆಲ್ ಮ್ಯಾನೆಜ್‌ಮೆಂಟ್ ನಲ್ಲಿ ನೀಡಲಾಗುತ್ತಿದ್ದು, ಸದರ ತರಬೇತಿ ಪಡೆಯಲಿಚ್ಚಿಸುವ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/sevasindhu/DepartmentServices ಅಥವಾ https://dom.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 2 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596 ಅಥವಾ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದು.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version