Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಿದ 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರವನ್ನು ಕೆನರಾ ಬ್ಯಾಂಕ್ ಕುಂದಾಪುರ ಶಾಖೆಯ ಮುಖ್ಯ ಪ್ರಬಂಧಕರಾದ ರಾಜು ಕೆ. ಉದ್ಘಾಟಿಸಿ, ಕಾಲೇಜು ನೀಡುತ್ತಿರುವ ಈ ತರಬೇತಿಯನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಮಾತನಾಡಿ, ಕಾಲೇಜಿನಲ್ಲಿ ಕಳೆದ 3 ವಷಗಳಿಂದ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ್ಯಗಳನ್ನು ಈ ತರಬೇತಿ ಕಾರ್ಯಾಗಾರಗಳ ಮೂಲಕ ಪಡೆದುಕೊಳ್ಳಬೇಕು ಎಂದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಹಾಗೂ ಮ್ಯಾಜಿಕ್ ಬಸ್ ಫೌಂಡೇಶನ್ ತರಬೇತುದಾರರಾದ ಜೋಶ್ವ ಡೆನಿಯಲ್ ಉಪಸ್ಥಿತರಿದ್ದರು.

ಅಂತಿಮ ವರ್ಷದ ಬಿ.ಕಾಂ. ವಿದ್ಯಾರ್ಥಿನಿ ಕಾವ್ಯ ಪ್ರಾರ್ಥಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಸಹ ಪ್ರಾಧ್ಯಾಪಕರಾದ ಮಹೇಶ್ ಕುಮಾರ್ ಪ್ರಸ್ತಾವಿಸಿದರು. ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ವಿಲ್ಮಾ ಶೆರಲ್ ಡಿಸೋಜ ಅತಿಥಿಗಳನ್ನು ಪರಿಚಯಿಸಿದರು. ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ನಿರೂಪಿಸಿ, ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಯಾದ ತಿಮ್ಮಪ್ಪ ಡಿ.ಎಸ್. ಸ್ವಾಗತಿಸಿ, ಜಯಲಕ್ಷ್ಮಿ ವಂದಿಸಿದರು.

Exit mobile version