Site icon Kundapra.com ಕುಂದಾಪ್ರ ಡಾಟ್ ಕಾಂ

ಹೊಸ ಯಾಂತ್ರೀಕೃತ ಮೀನುಗಾರಿಕೆ ದೋಣಿ ನಿರ್ಮಾಣಕ್ಕೆ ಸಾಧ್ಯತಾ ಪತ್ರ ಪಡೆಯಲು ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯ ಮೀನುಗಾರರು ಹೊಸದಾಗಿ ಯಾಂತ್ರೀಕೃತ ಮೀನುಗಾರಿಕಾ ದೋಣಿ ನಿರ್ಮಾಣ ಮಾಡಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಸಾಧ್ಯತಾ / ಅನುಮತಿ ಪತ್ರ ನೀಡಲು ಸರ್ಕಾರಿ ಆದೇಶದನ್ವಯ ಅನುಮೋದನೆ ನೀಡಲಾಗಿದ್ದು, ಆಸಕ್ತರು ವೆಬ್‌ಸೈಟ್  URL:frims.karnataka.gov.in/BCC ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪ್ರೂಟ್ಸ್ ಐಡಿ ಕಡ್ಡಾಯವಾಗಿ ಹೊಂದಿರುವ, ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿರುವ ಹಾಗೂ ಮೀನುಗಾರಿಕೆ ಸಹಕಾರಿ ಸಂಘದ ಸದಸ್ಯರಾಗಿರುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿದಾರರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಒಂದು ಪ್ರತಿಯನ್ನು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸದಸ್ಯ ಕಾರ್ಯದರ್ಶಿ/ ಮೀನುಗಾರಿಕೆ ಉಪನಿರ್ದೇಶಕರು, ಜಿಲ್ಲಾ ಪಂಚಾಯತ್ ಹಳೇ ಕಟ್ಟಡ, ಬನ್ನಂಜೆ ಉಡುಪಿ ಕಛೇರಿಯ ವಿಳಾಸಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಮೀನುಗಾರಿಕೆ ಇಲಾಖೆ ಕಛೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.     

Exit mobile version