Site icon Kundapra.com ಕುಂದಾಪ್ರ ಡಾಟ್ ಕಾಂ

ಬಿದ್ಕಲ್‌ಕಟ್ಟೆ: ರಾತ್ರಿ ಮಲಗಿದ್ದ ಗೋ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ತಾಲೂಕಿನ ಬಿದ್ಕಲ್ಕಟ್ಟೆ ಪೇಟೆಯ ಬಳಿ ರಸ್ತೆ ಬದಿಯಲ್ಲಿ ಮಲಗಿದ್ದ ಒಂದು ಹಸುವನ್ನು ಹಿಡಿದು ಅದಕ್ಕೆ ಬಳ್ಳಿಯಿಂದ ಕುತ್ತಿಗೆಗೆ ಬಿಗಿದು ಅದನ್ನು ಹಿಂಸಾತ್ಮಕವಾಗಿ ಎಳೆದು ವಾಹನಕ್ಕೆ ತುಂಬಿಸಿ ಕಳವು ಮಾಡಿಕೊಂಡು ಹೋದ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಅಮೆಮ್ಮಾರ್ ಮಸೀದಿ ಬಳಿಯ ನಿವಾಸಿ ಇಮ್ರಾನ್ ಯಾನೆ ಕುಟ್ಟು (31)ಮತ್ತು ಮಂಗಳೂರು ತಾಲೂಕಿನ ಗಂಜಿಮಠ, ಮುಂದುಪುರ ಗ್ರಾಮದ ಮುಂಡೇವು ನಿವಾಸಿ ಇರ್ಷಾದ್(30) ಬಂಧಿತ ಆರೋಪಿಗಳು.

ಬಂಧಿತರಿಬ್ಬರೂ ಕುಖ್ಯಾತ ಜಾನುವಾರು ಕಳ್ಳರು. ಆರೋಪಿ ಇಮ್ರಾನ್ ಯಾನೆ ಕುಟ್ಟು ವಿರುದ್ಧ ಉಡುಪಿ ಜಿಲ್ಲೆಯ ಈ ಪ್ರಕರಣ ಸೇರಿದಂತೆ, ದಕ್ಷಿಣ ಕನ್ನಡ, ಕೊಡಗು, ಹಾಸನ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಒಟ್ಟು 35 ಪ್ರಕರಣಗಳು ದಾಖಲಾಗಿವೆ. ಇನ್ನು ಆರೋಪಿ ಇರ್ಷಾದ್ ಮೇಲೆ ಉಡುಪಿ ಜಿಲ್ಲೆಯ ಈ ಪ್ರಕರಣವೂ ಸೇರಿದಂತೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಒಟ್ಟು 14 ಪ್ರಕರಣಗಳು ದಾಖಲಾಗಿವೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version