ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಇವರ ಸಹಭಾಗಿತ್ವದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ಇದರ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ಅಧ್ಯಕ್ಷರಾದ ಮಂಜುನಾಥ್ ಭಟ್ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ Academics and Training, USAMEC, ಬೆಂಗಳೂರು ಇದರ ನಿರ್ದೇಶಕರಾದ ಡಾ. ಸಿ. ಕೆ. ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಆಸಕ್ತಿ ಇಲ್ಲದ ಕ್ಷೇತ್ರದಲ್ಲಿ ಮುಂದುವರೆಯುವಂತೆ ಒತ್ತಾಯ ಮಾಡುವುದರಿಂದ ಸಮಾಜದಲ್ಲಿ ಅನೇಕ ದುರಂತಗಳು ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ. ಅದಕ್ಕೆ ಅವಕಾಶ ಕೊಡದೇ ಅವರ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಅನುವು ಮಾಡಿಕೊಡಬೇಕುಎಂದರು.
ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಗೌರವಾಧ್ಯಕ್ಷರಾದ ರಮಾಕಾಂತ್ ರೇವಣ್ ಕರ್, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಕಾರ್ಯದರ್ಶಿಗಳಾದ ಹರಿಪ್ರಸಾದ್, ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ರಾಜ್ಯ ಪ್ರತಿನಿಧಿ
ಕೃಷ್ಣಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಸ್ಮಿತಾ ಶೆಟ್ಟಿ ನಿರೂಪಿಸಿ, ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ರಾಜ್ಯ ಪ್ರತಿನಿಧಿ ಕೃಷ್ಣ ಮೂರ್ತಿ ಸ್ವಾಗತಿಸಿದರು. ವಿದ್ಯೋದಯ ಪದವಿಪೂರ್ವ ಕಾಲೇಜು ಉಡುಪಿ ಇಲ್ಲಿನ ಉಪನ್ಯಾಸಕಿ. ರಂಜನಾ ವಂದಿಸಿದರು.

