ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿಕ್ಷಣದ ಗುಣಮಟ್ಟ ವ್ಯಕ್ತಿತ್ವದ ನಿರ್ಮಾಣಕ್ಕೆ ಸಹಾಯಕವಾಗಬೇಕು. ಅಂತಹ ಶಿಕ್ಷಣ ಆಂತರ್ಯದ ಶಕ್ತಿಯನ್ನು ಉದ್ದೀಪನಗೊಳಿಸಿ ಜ್ಞಾನ ಸಂಪಾದಿಸುವಂತಾಗಬೇಕಾದರೆ ಪಠ್ಯದೊಂದಿಗೆ ಪಠ್ಯಪೂರಕ ಚಟುವಟಿಕೆಗಳು ಮುಖ್ಯ. ಅವುಗಳಿಂದ ಶಿಕ್ಷಣ ಪರಿಪೂರ್ಣವಾಗಲು ಸಾಧ್ಯ. ಈ ರೀತಿಯ ಚಟುವಟಿಕೆಗಳು ವರ್ತಮಾನದ ತುರ್ತು ಎಂದು ಉಡುಪಿಯ ಎಮ್‌ಜಿಎಮ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಕೆ. ಸುರೇಂದ್ರನಾಥ್ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಆಯೋಜಿಸಿದ 4 ದಿನಗಳ ಪೂರ್ವ ಪರಿಚಯ ‘ಪ್ರೇರಣಾ’ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಪ್ರಸ್ತಾಪಿಸಿದರು. ವಾಣಿಜ್ಯ ಪ್ರಾಧ್ಯಾಪಕ ಸತೀಶ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಶೈಕ್ಷಣಿಕ ನಿಕಾಯಕ ಶ್ರೀ ಗಿರಿರಾಜ್ ಭಟ್ ಉಪಸ್ಥಿತರಿದ್ದರು.
ಕನ್ನಡ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ನಿರೂಪಿಸಿ, ಐಕ್ಯೂಎಸಿ ಸಂಯೋಜಕಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ. ವಂದಿಸಿದರು.

