Site icon Kundapra.com ಕುಂದಾಪ್ರ ಡಾಟ್ ಕಾಂ

ಮುಳ್ಳಿಕಟ್ಟೆ: ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮುಳ್ಳಿಕಟ್ಟೆ ಸಮೀಪ ರಾ. ಹೆ 66ರ ರಿಕ್ಷಾ ನಿಲ್ದಾಣ ಬಳಿ ಬೆಳಗ್ಗೆ ನಡೆದಿದೆ.

ಬೈಂದೂರು ಕಡೆಯಿಂದ ಬರುತ್ತಿದ್ದ ಕಾರು, ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಪಲ್ಟಿಯಾಗಿ ರಸ್ತೆಯ ಬದಿ ಬಿದ್ದಿದ್ದು, ಇದರಿಂದ ಕಾರಿನಲ್ಲಿದ್ದ ತಾಜುದ್ದೀನ್ ಹಾಗೂ ಚಾಲಕನ ತಾಜ್ಮುಲ್ ಎಂಬವರು ತೀವ್ರವಾಗಿ ಗಾಯ ಗೊಂಡಿದ್ದಾರೆ.

ಕಾರು ಸಂಪೂರ್ಣ ಜಖಂಗೊಂಡಿದ್ದು, ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version