Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ: ವೀರ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುವುದರ ಜೊತೆಗೆ ದೇಶದ ಐತಿಹಾಸಿಕ ಗೆಲುವಿಗೆ ಅಭಿನಂದನೆ ಸಲ್ಲಿಸಲು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯ ಪತಾಕೆ ಹಾರಿಸಿದ ದಿನವನ್ನು ನೆನಪಿಸಿಕೊಳ್ಳುವುದು, ಸಂಭ್ರಮಿಸುವುದು ಮತ್ತು ಭಾರತೀಯ ಸೈನ್ಯದ ಶೌರ್ಯ, ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು.  ಕಾರ್ಯಕ್ರಮ ಸಂಯೋಜಕರಾದ ANO Lt. ಹರೀಶ್ ಬಿ., ಎನ್.ಸಿ.ಸಿ. ಕೇರ್ ಟೇಕರ್ ಶರತ್ ಕುಮಾರ್ ಉಪಸ್ಥಿತರಿದ್ದರು.

ಎನ್.ಸಿ.ಸಿ. ಕೆಡೆಟ್‌ಗಳಾದ ಸಹನಾ ಪ್ರಾರ್ಥಿಸಿ, ಸುಪ್ರಜ್ ಕುಮಾರ್ ನಿರೂಪಿಸಿ,

Exit mobile version