ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಗಣಕಯಂತ್ರ ವಿಭಾಗ ಮತ್ತು ಪ್ಲೇಸ್ಮೆಂಟ್ ಸೆಲ್ ಇವರ ವತಿಯಿಂದ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಐದು ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಕಾಲೇಜಿನ ರಾಧಾ ಭಾಯಿ ಸಭಾಂಗಣದಲ್ಲಿ ನೆರವೇರಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಂಪನ್ಮೂಲ ವ್ಯಕಿಗಳಾಗಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಮ್ಯಾಜಿಕ್ ಬಸ್ ಫೌಂಡೇಶನ್ ನ ನವೀನ್, ಭಾರ್ಗವ್ ಮತ್ತು ರಾಹುಲ್, ಗಣಕಯಂತ್ರ ವಿಭಾಗ ಮುಖ್ಯಸ್ಥರು ಗಣೇಶ್ ಕೆ., ಗಣಕ ವಿಜ್ಞಾನ ವಿಭಾಗದ ಉಪನ್ಯಾಸರಾದ ವಿಜಯಲಕ್ಷ್ಮಿ ಎನ್. ಶೆಟ್ಟಿ, ಪ್ಲೇಸ್ಮೆಂಟ್ ಸೆಲ್ ನ ಸಂಚಾಲಕರಾದ ರಾಜೇಂದ್ರ ಹೋಬಳಿದಾರ್ ಉಪಸ್ಥಿತರಿದ್ದರು.
ತೃತೀಯ ಬಿಸಿಎ ವಿದ್ಯಾರ್ಥಿನಿ ಲತಿಕ ಡಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಸ್ಮೃತಿ ಪ್ರಾರ್ಥನೆ ನೆರವೇರಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿನಿ ರಶ್ಮಿತಾ ವಿ ಸ್ವಾಗತಿಸ, ವಿದ್ಯಾರ್ಥಿನಿ ಪುಶ್ಪಿತಾ ಶೆಟ್ಟಿ ವಂದಿಸಿದರು.
ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

