ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಆಧುನಿಕ ಕಾಲಘಟ್ಟದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಇದರ ಮಹತ್ವ ಅರಿತು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಹೇಳಿದರು.
ಅವರು ಸೋಮವಾರ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ – ರತ್ತೂಬಾಯಿ ಜನತಾ ಪ್ರೌಢಶಾಲೆ ನೇತೃತ್ವದಲ್ಲಿ ಶಾಲೆಯಲ್ಲಿ ಆಯೋಜಿಸಲಾದ 14 ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಬೈಂದೂರು ವಲಯ ಮಟ್ಟದ ಯೋಗಾಸನ ಸ್ಪರ್ಧೆ 2025-26 ಉದ್ಘಾಟಿಸಿ ಮಾತನಾಡಿದರು.

ಬೈಂದೂರು ವಲಯದಲ್ಲಿ ಅನುದಾನಿತ ಶಾಲೆಗಳ ಪೈಕಿ ರತ್ತೂಬಾಯಿ ಪ್ರೌಢಶಾಲೆ ಮಾದರಿಯಾಗಿದೆ. ಶೇ.100ಫಲಿತಾಂಶ ದಾಖಲಿಸಿದೆ. ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳನ್ನು ಸಕ್ರೀಯವಾಗಿ ತೊಡಗಿಸಿಕೊಳ್ಳುವಂತೆ ಮಾಡಲಾಗುತ್ತಿರುವುದು ಶ್ಲಾಘನಾರ್ಹ ಎಂದರು.
ಶ್ರೀ ವಿ.ವಿ.ವಿ ಮಂಡಳಿ ನಿರ್ದೇಶಕ ರಘುರಾಮ ಕೆ. ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ದಯಾನಂದ ಶೆಟ್ಟಿ, ಗೋಪಾಲ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರತಿನಿಧಿ ರವಿಶಂಕರ ಹೆಗ್ಡೆ, ಬೈಂದೂರು ಗ್ರೇಡ್-1 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅರುಣ ಕುಮಾರ್ ಶೆಟ್ಟಿ, ಬೈಂದೂರು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ಅಧಿಕಾರಿ ಪ್ರಭಾಕರ ಎಸ್., ಬಿ.ಆರ್.ಪಿ ಮಂಜುನಾಥ ದೇವಾಡಿಗ, ಪೋಷಕ ಪ್ರತಿನಿಧಿ ರೇಷ್ಮಾ ಭಾನು ಮೊದಲಾದವರು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ವಿಜಯ ಕುಮಾರ್ ಶೆಟ್ಟಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ರತ್ತೂಬಾಯಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಆನಂದ ಮದ್ದೋಡಿ ಸ್ವಾಗತಿಸಿದರು. ಶಿಕ್ಷಕ ಪ್ರಕಾಶ್ ಮಾಕೋಡಿ ವಂದಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗುರುರಾಜ ಎಸ್. ಕಾರ್ಯಕ್ರಮ ನಿರೂಪಿಸಿದರು.