ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರ ಇದುವರೆಗಿನ ಶೈಕ್ಷಣಿಕ ಸಾಧನೆ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ 2025ನೇ ಸಾಲಿನ ರಾಷ್ಟ್ರೀಯ ಮಟ್ಟದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಮೆಮೋರಿಯಲ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.
ಗಣೇಶ ಮೊಗವೀರ ಅವರನ್ನು ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಿ ಮುಂಬೈನ ಪ್ರಸಿದ್ಧ ತಾಜ್ ಹೋಟೆಲ್ ನಲ್ಲಿ ಆಯೋಜಿಸಿದ ವೈಭವದ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅವರ ಸಾಧನೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

