ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ನಾಗ ಬನದಲ್ಲಿ ನಾಗರ ಪಂಚಮಿ ಹಬ್ಬದ ಪೂಜೆಯನ್ನು ಅದ್ದೂರಿಯಾಗಿ ನೆರವೇರಿಸಲಾಯಿತು.
ಅರ್ಚಕರಾದ ರಾಜು ಭಟ್ಟರು ನಾಗದೇವರನ್ನು ವಿಶೇಷ ಅಲಂಕಾರದೊಂದಿಗೆ ಪೂಜೆ ನೆರವೇರಿಸಿದರು. ದೇವಸ್ಥಾನದ ಆಡಳಿತ ಮಂಡಳಿಯ ಮುಖ್ಯಸ್ಥೆ ಇಂದಿರಾ ಸುದರ್ಶನ ಗಾಣಿಗ, ಸದಸ್ಯರಾದ ಶೇಖರ್ ಬೈಂದೂರು, ಪ್ರಸನ್ನ ದೇವಾಡಿಗ ಬೈಂದೂರು ಹಾಗೂ ಯೋಗೇಂದ್ರ ಗಾಣಿಗ ಉಪಸ್ಥಿತರಿದ್ದರು.

