ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ವಿದ್ಯಾರ್ಥಿಗಳಿಗೆ ಅಬಿವಿನ್ಯಾಸ ಕಾರ್ಯಕ್ರಮ ಕಾಲೇಜಿನ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಸೋಮವಾರ ಜರುಗಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ,
ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿಯೇ ಏಕಾಗ್ರತೆ, ಆಸಕ್ತಿ, ಜೀವನದ ಸಂಸ್ಕಾರ ಮುಂತಾದವುಗಳಿಂದ ಯಶಸ್ಸು ಸಾಧಿಸಲು ಸಾಧ್ಯ ಜೊತೆಗೆ ಲಭ್ಯವಿರುವ ಉತ್ತಮ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಗುರಿಯನ್ನು ತಲುಪಬೇಕು. ಪೋಷಕರ ಕನಸನ್ನು ನನಸಾಗಿಸುವುದೇ ವಿದ್ಯಾರ್ಥಿಗಳ ಗುರಿಯಾಗಿರಬೇಕು. ಯಶಸ್ಸಿಗೆ ಸರಿಯಾದ ಯೋಜನೆಯೊಂದಿಗೆ ಪ್ರಾಮಾಣಿಕ ಪ್ರಯತ್ನವು ಅವಶ್ಯ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಉತ್ತಮ ಕಲಿಕಾ ವಾತಾವರಣವನ್ನು ನಿರ್ಮಿಸಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ಸಂದೀಪ ಕೆ. ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಸೂರಜ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕನ್ನಡ ವಿಭಾಗದ ಉಪನ್ಯಾಸಕಿ ಪ್ರಮೀಳಾ ನಿರೂಪಿಸಿ, ಗಣಕ ವಿಭಾಗದ ಉಪನ್ಯಾಸಕಿ ಮನವಿ ಧನ್ಯವಾದ ಗೈದರು.

