ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 2025-26ನೇ ಸಾಲಿನಲ್ಲಿ ಕಾಲೇಜಿಗೆ ಸೇರ್ಪಡೆಗೊಂಡ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತ್ತು.
ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ಬಿ.ಬಿ.ಎ ಕೋರ್ಸ್ಗಳ ವಿಶೇಷತೆಗಳು ಹಾಗೂ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಇದರಿಂದ ಲಭ್ಯವಾಗುವ ಪ್ರಯೋಜನಗಳ ಕುರಿತು ತಿಳಿಸಿದರು.
ವಿಭಾಗದ ಪ್ರಾಧ್ಯಾಪಕರುಗಳಾದ ಅವಿತಾ ಕೊರೆಯಾ, ಹರೀಶ್ ಬಿ, ರಜತ್ ಬಂಗೇರ ಹಾಗೂ ವಿಶಾಲಾಕ್ಷಿ ಉಪಸ್ಥಿತರಿದ್ದರು.
ಸಹಾಯಕ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು.

