Site icon Kundapra.com ಕುಂದಾಪ್ರ ಡಾಟ್ ಕಾಂ

21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕಳೆದ 21 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಅಮಾಸೆಬೈಲು ಪೊಲೀಸರು ಪತ್ತೆ ಹಚ್ಚಿದ್ದಾರೆ.

2004ರಲ್ಲಿ ಶಂಕರನಾರಾಯಣ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದರ ಆರೋಪಿ ಕಾಸರಗೋಡು ಜಿಲ್ಲೆಯ ಪುತ್ತೂರು ಮೊಗ್ರಾಲು ನಿವಾಸಿ ಫಾರೂಕ್ ಬಂಧಿತ.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾ ಲಯದ ವಿಚಾರಣೆಗೆ ಹಾಜರಾಗದೆ ಇದ್ದ ಈತನ ವಿರುದ್ಧ ಎಲ್‌ಪಿಸಿ ವಾರಂಟ್ ಹೊರಡಿಸಲಾಗಿತ್ತು. ಅದರಂತೆ ಎಸ್ಪಿ ಹರಿರಾಮ್ ಶಂಕ‌ರ್, ಅಡಿಶನಲ್ ಎಸ್ಪಿ ಸುಧಾಕರ ಎಸ್. ನಾಯ್ಕ ಮಾರ್ಗದರ್ಶನದಲ್ಲಿ ಕುಂದಾಪುರ ಉಪ ವಿಭಾ ಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ, ಪೊಲೀಸ್ ವೃತ್ತ ನಿರೀಕ್ಷಕ ಜಯರಾಮ ಗೌಡ ನಿರ್ದೇಶನದಲ್ಲಿ ಅಮಾಸೆ ಬೈಲು ಪಿಎಸ್‌ಐ ಅಶೋಕ್ ಕುಮಾರ್, ಪೊಲೀಸ್ ಉಪ ನಿರೀಕ್ಷಕ ಚಂದ್ರ ಎ.ಕೆ. ಅವರ ತಂಡ ಹಲವು ಆಯಾಮಗಳ ಮೂಲಕ ಮಾಹಿತಿ ಕಲೆ ಹಾಕಿ ಜು.28ರಂದು ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಬಂಧಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎಚ್‌ಸಿ ರಾಘವೇಂದ್ರ, ಪರಮೇಶಪ್ಪ, ಪಿಸಿಗಳಾದ ಸುಧಾಕರ್, ದರ್ಶನ್, ಮಲ್ಲೇಶ್, ಜಿಲ್ಲಾ ಪೊಲೀಸ್ ಕಚೇರಿಯ, ದಿನೇಶ್ ಕಾರ್ಯಚರಣೆ ತಂಡದಲ್ಲಿದ್ದರು.

Exit mobile version