Site icon Kundapra.com ಕುಂದಾಪ್ರ ಡಾಟ್ ಕಾಂ

ಅಂತಾರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದಿನೇಶ್ ಗಾಣಿಗ ಅವರಿಗೆ ಚಿನ್ನದ ಪದಕ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ನೇಪಾಳ ರಂಗಶೀಲ ಸ್ಟೇಡಿಯಂನಲ್ಲಿ ನಡೆದಿರುವ  ಅಂತಾರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಅಂತಾರಾಷ್ಟ್ರೀಯ ಕ್ರೀಡಾ ಪಟು ಕೋಟದ ದಿನೇಶ ಗಾಣಿಗ ಅವರು ಒಂದು ಚಿನ್ನದ ಪದಕ ಗಳಿಸಿದ್ದಾರೆ. 

ವೇಗ ನಡಿಗೆ, ಗುಂಡೆಸೆತ, ಲಾಂಗ್ ಜಂಪ್‌ನಲ್ಲಿ ಭಾಗವಹಿಸಿ, 5 ಕಿಲೋಮೀಟರ್ ವೇಗ ನಡಿಗೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದಿದ್ದಾರೆ.

ಈ ಹಿಂದೆ ಥೈಲ್ಯಾಂಡ್ ರಾಜಾಬಟಾ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನದ ಪದಕ, ಹರ್ಡಲ್ಸನಲ್ಲಿ ದ್ವಿತೀಯ ಒಂದು ಬೆಳ್ಳಿ ಪದಕ ಮತ್ತು ವೇಗ ನಡಿಗೆಯಲ್ಲಿ ತೃತೀಯ ಕಂಚು ಪದಕ  ಹಾಗೂ 2021 ಸಿಂಗಾಪುರ, 2022 ಮಲೇಷಿಯಾ ಹಾಗೂ 2023 ರಲ್ಲಿ ಶ್ರೀಲಂಕಾ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ, ಕಂಚು ಪದಕ ವಿಜೇತರಾಗಿದ್ದಾರೆ.

Exit mobile version