ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಜಿಎಸ್‌ಬಿ ಸಮಾಜದ ಸುಮಂಗಲಿಯರಿಂದ ಸಮಾಜದ ಶ್ರೇಯೋಭಿವೃದ್ಧಿಗಾಗಿ ಸಾಮೂಹಿಕ ಚೂಡಿ ಪೂಜೆ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಸಾಮೂಹಿಕ ಚೂಡಿ ಪೂಜೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಮಧ್ಯಾಹ್ನ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು.
ದೇವಳದ ಧರ್ಮದರ್ಶಿ ಮಂಡಳಿ ಸದಸ್ಯರು, ಊರ ಪರ ಊರಿನ ಜಿಎಸ್‌ಬಿ ಸಮಾಜಬಾಂಧವರು ಮತ್ತಿತರರು ಉಪಸ್ಥಿತರಿದ್ದರು.

