ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ಕಂಡು ಬರುತ್ತಿದೆ. ಇದರ ದುಷ್ಪರಿಣಾಮಗಳನ್ನು ಅರ್ಥಮಾಡಿಕೊಂಡು ಎಚ್ಚರಿಕೆಯಿಂದ ಬದುಕುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಿದೆ ಎಂದು ಉಡುಪಿ ಜಿಲ್ಲೆ ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹೇಳಿದರು.

ಅವರು ಉಪ್ಪುಂದ ಜೇಸಿಐ ಆಶ್ರಯದಲ್ಲಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾದ ಕಾನೂನು ಮಾಹಿತಿ ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡಿದರು.
ಯಾವುದೇ ರೀತಿಯ ಮಾದಕ ಸೇವನೆಯ ಪ್ರಕರಣಕ್ಕೆ ನ್ಯಾಯಾಲಯದಲ್ಲಿ ಜಾಮೀನು ಸಿಗುವುದಿಲ್ಲ. ಜೈಲೇ ಗತಿಯಾಗುವುದು. ಈ ವಿಷಯದಲ್ಲಿ ಕಾಯ್ದೆ ಕಠಿಣವಾಗಿದೆ. ನಿಮ್ಮ ನಂಬಿದ ಇಡೀ ಕುಟುಂಬ ನೋವು ಅನುಭವಿಸಬೇಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಈ ದುಶ್ಚಟಗಳಿಂದ ದೂರವಿದ್ದು, ತಮ್ಮ ಸುತ್ತಮುತ್ತಲಿನಲ್ಲೂ ಈ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಉಪ್ಪುಂದ ಜೇಸಿಐ ಅಧ್ಯಕ್ಷ ಭರತ್ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಜೆಸಿಐ ಸಂಸ್ಥೆ ಮಾನವೀಯ ಸೇವೆಗಳೊಂದಿಗೆ ವ್ಯಕ್ತಿತ್ವ ವಿಕಸನ ಹಾಗೂ ಜೀವನದ ಕಲೆಯನ್ನು ಕಲಿಸುವುದರ ಮುಖಾಂತರ ಸದೃಢ ಸಮಾಜ ನಿರ್ಮಾಣ ಮಾಡಲು ಕೈಜೋಡಿಸಿದೆ ಎಂದರು.
ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಉಡುಪಿ ಜಿಲ್ಲೆ ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಅವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಉದ್ಯಮಿ ಬಿ.ಎಸ್.ಸುರೇಶ್ ಶೆಟ್ಟಿ, ಜಿ.ಪಂ ಮಾಜಿ ಸದಸ್ಯ ಮದನ್ ಕುಮಾರ್, ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ, ಬೈಂದೂರು ಪೋಲಿಸ್ ಠಾಣಾಧಿಕಾರಿ ತಿಮ್ಮೇಶ್ ಬಿ. ಎನ್, ಬೈಂದೂರು ತಾಲೂಕು ಕೆಡಿಪಿ ಸದಸ್ಯ ಶೇಖರ ಪೂಜಾರಿ, ಬೈಂದೂರು ಸೇನೆಶ್ವರ ದೇವಸ್ಥಾನದ ಆಡಳಿತ ಅಧ್ಯಕ್ಷ ಗಿರೀಶ್ ಬೈಂದೂರು, ಜೇಸಿ ಸ್ಥಾಪಕಾದ್ಯಕ್ಷರಾದ ದಿವಾಕರ ಶೆಟ್ಟಿ, ಸೀನಿಯರ್ ಛೇಂಬರ್ ಅಧ್ಯಕ್ಷ ಶ್ರಿಕಾಂತ ಶೆಟ್ಟಿ ಗಂಟಿಹೊಳೆ, ಪೂರ್ವಾಧ್ಯಕ್ಷ ಪ್ರಭಾಕರ ಶೆಟ್ಟಿ, ಸರ್ವ ಸದಸ್ಯರಾದ ಮಂಜುನಾಥ್ ಪೂಜಾರಿ ಉಪಸ್ಥಿತರಿದ್ದರು.
ಜಿಸಿಐ ಪೂರ್ವಅಧ್ಯಕ್ಷ ಮಂಜುನಾಥ್ ದೇವಾಡಿಗ ಸ್ವಾಗತಿಸಿ, ಕಾರ್ಯದರ್ಶಿ ಅಭಿಷೇಕ್ ವಂದಿಸಿದರು. ಪ್ರಾಧ್ಯಾಪಕ ನವೀನ್ ನಿರೂಪಿಸಿದರು.