Site icon Kundapra.com ಕುಂದಾಪ್ರ ಡಾಟ್ ಕಾಂ

ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಲಾಸ್ಯ ಪ್ರಥಮ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಮೊರಾರ್ಜಿ ದೇಸಾಯಿ ವಸತಿ ಶಾಲೆ ಹೇರೆಂಜಾಲು ಕಂಬದಕೋಣೆ ಅವರು ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮದ್ಯಸ್ಥ ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.

ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ. ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದರು.

ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದರು.

Exit mobile version