ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನ, ಆಶೀರ್ವಾದದೊಂದಿಗೆ ಪ್ರಾರಂಭಗೊಂಡ ’ಅಖಂಡ ಭಜನಾ ಸಪ್ತಾಹ ಮಹೋತ್ಸವʼ ಬುಧವಾರದಂದು ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿತು.
ಬೆಳಿಗ್ಗೆ ದೀಪ ವಿಸರ್ಜನೆಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಮತ್ತು ಪುರೋಹಿತರಾದ ಜಿ. ಅನಂತಕೃಷ್ಣ ಭಟ್ ನೇತೃತ್ವದಲ್ಲಿ ನಡೆಯಿತು.
ದೇವರಿಗೆ ಮಧ್ಯಾಹ್ನ ಮಹಾಪೂಜೆ, ಪಂಚಭಕ್ಷ ನೈವೇದ್ಯ, ಮಹಾಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಹಸ್ರಾರು ಭಜಕರ ಸೇವೆಯೊಂದಿಗೆ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಅಖಂಡ ಭಜನಾ ಸಪ್ತಾಹ ಮಹೋತ್ಸವದಲ್ಲಿ ಊರ ಪರ ಊರಿನ ಸುಮಾರು 60ಕ್ಕೂ ಮಿಕ್ಕಿ ಭಜನಾ ತಂಡಗಳು ಪಾಲ್ಗೊಂಡು ಭಜನಾ ಸೇವೆ ಸಮರ್ಪಿಸಿದರು.
ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಜನಾ ಸಪ್ತಾಹ ಸಮಿತಿ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು, ಭಜಕರು ಮತ್ತಿತರರು ಮಹೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಪೋಟೋ ಪೈಲ್ ನೇಮ್ : ೦೬ಜಿಎಎನ್೬, ೦೬ಜಿಎಎನ್೭ (ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ’ಅಖಂಡ ಭಜನಾ ಸಪ್ತಾಹ’ ಮಹೋತ್ಸವ’ ಇಂದು ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿತು)

