Site icon Kundapra.com ಕುಂದಾಪ್ರ ಡಾಟ್ ಕಾಂ

ಸರಸ್ವತಿ ವಿದ್ಯಾಲಯದಲ್ಲಿ ಬ್ಯಾಂಕ್ ಖಾತೆ ಸುರಕ್ಷತಾ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಯಾವುದೇ ಸಂದರ್ಭದಲ್ಲಿಯೂ ಕೂಡ ಬ್ಯಾಂಕ್ ಖಾತೆಗೆ ಸಂಬಂಧಪಟ್ಟಂತಹ ತೀರಾ ವೈಯಕ್ತಿಕ ವಿವರಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಲು ಹೋಗಬಾರದು. ಈ ಬಗ್ಗೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ನಾವು ಅರಿತುಕೊಂಡು ಎಲ್ಲರಿಗೂ ತಿಳಿಸುವ ಪ್ರಯತ್ನಗಳನ್ನು ಕೂಡ  ಮಾಡಬೇಕು ಎಂದು ಗಂಗೊಳ್ಳಿಯ ಕೆನರಾ ಬ್ಯಾಂಕಿನ ಆಫೀಸರ್ ಸಾಗರ್ ಕೆ ಶಿವದಾಸ್ ಅವರು ಅಭಿಪ್ರಾಯ ಪಟ್ಟರು.

ಅವರು ಗಂಗೊಳ್ಳಿಯ ಕೆನರಾ ಬ್ಯಾಂಕ್, ವತಿಯಿಂದ ಗಂಗೊಳ್ಳಿಯ  ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ  ನಡೆದ  ಕಾರ್ಯಕ್ರಮದಲ್ಲಿ ಅಕ್ರಮ ಅಕೌಂಟ್ ಗಳನ್ನು ತಡೆಗಟ್ಟುವ ಕುರಿತು ಮತ್ತು ಸೈಬರ್ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು. 

ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ವಾಸು ದೇವಾಡಿಗ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲೆ ಕವಿತಾ ಎಂ. ಸಿ. ಅಧ್ಯಕ್ಷತೆ ವಹಿಸಿದ್ದರು.

ಕೆನರಾ ಬ್ಯಾಂಕ್ ಸಿಬ್ಬಂದಿ ರಾಜೇಂದ್ರ ಬಿ. ಟಿ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೇಷ್ಠ ಮೇಸ್ತ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ನಿರ್ವಹಿಸಿ, ವಂದಿಸಿದರು.

Exit mobile version